ಕೊರೋನಾ ಬಳಿಕ ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸೆಪ್ಟೆಂಬರ್ 26ರಂದು ನವರಾತ್ರಿ ಪೂಜೆ ಆರಂಭವಾಗಲಿದ್ದು, ಅಕ್ಟೋಬರ್ 4ರಂದು ಜಂಬೂ ಸವಾರಿ ನಡೆಸಲು ಸರ್ಕಾರ ಮುಂದಾಗಿದೆ. ಶ್ರೀರಂಗಪಟ್ಟಣ, ಚಾಮರಾಜನಗರಗಳಲ್ಲೂ ಅದ್ಧೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ಮುಂದಿನ ಎರಡು ತಿಂಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ದಸರಾಗೆ ಪ್ರಚಾರ ನೀಡಲಾಗುತ್ತದೆ. 15 ದಿನಗಳ ಮುಂಚೆಯೇ ವಸ್ತು ಪ್ರದರ್ಶನ ಪ್ರಾರಂಭಿಸಲು ಸೂಚನೆ ನೀಡಲಾಗಿದೆ ಅಂತ ಸಿಎಂ ಹೇಳಿದ್ದಾರೆ.
#publictv #dasara #mysuru