ರಾಮನಗರ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಮಳೆಯಿಂದ ಉಂಟಾದ ಅವಾಂತರಗಳು ಗೋಚರವಾಗಿವೆ. ತಾಲೂಕಿನ ಕೂಟಗಲ್ ಗ್ರಾಮದಲ್ಲಿ ಅಪಾರ ಪ್ರಮಾಣದ ಮಳೆ ಹಾನಿಯಾಗಿದ್ದು, ಮಳೆ ನೀರಿನ ರಭಸಕ್ಕೆ ಜಮೀನಿನ ನಡುವೆ ದೊಡ್ಡ ಕಂದಕವೇ ಸೃಷ್ಠಿಯಾಗಿದೆ. ನೀರಿನ ರಭಸಕ್ಕೆ ತೆಂಗು, ರೇಷ್ಮೆ, ಬಾಳೆ ಹಾಗೂ ಜೋಳದ ಬೆಳೆ ಸಂಪೂರ್ಣ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಕಳೆದ ಒಂದು ವಾರದಿಂದ ನಿರಂತರ ಮಳೆ ಸುರಿದು ಅಪಾರ ಹಾನಿಯಾಗಿದ್ದರೂ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಗಳು ಬರದೇ ನಿರ್ಲಕ್ಷ್ಯ ವಹಿಸಿರೋದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.
#publictv #ramanagara #raindamage