ಕಳೆದ ಕೆಲ ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ತಮ್ಮ ಆಡಿಯೋಗೆ ಸಂಬಂಧಿಸಿ ಸಚಿವ ಮಾಧುಸ್ವಾಮಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಆಡಿಯೋದಲ್ಲಿರುವ ಧ್ವನಿ ನನ್ನದೇ.. ಎಂದು ಒಪ್ಪಿಕೊಂಡಿದ್ದಾರೆ. ಆದ್ರೆ ಈ ಆಡಿಯೋ ಹಳೆಯದ್ದು.. ಯಾವಾಗ ಮಾತನಾಡಿದೆ ಎಂಬುದು ನನಗೆ ನೆನಪಿಲ್ಲ.. ಆಡಿಯೋ ರೆಕಾರ್ಡ್ ಮಾಡಿರೋ ವ್ಯಕ್ತಿ ವಿರುದ್ಧ ದೂರು ನೀಡ್ತೀನಿ ಎಂದಿದ್ದಾರೆ. ಇದೇ ವೇಳೆ, ನಾನು ರಾಜೀನಾಮೆ ಕೊಡುವ ಪ್ರಮೇಯ ಬಂದಿಲ್ಲ. ಒಂದು ವೇಳೆ ಸಿಎಂ ರಾಜೀನಾಮೆ ಕೇಳಿದ್ರೆ ಕೊಡ್ತೀನಿ ಎಂದು ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಸಿಎಂ ಬೊಮ್ಮಾಯಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಹೊಗಳಿದ್ದಾರೆ. ಈ ಮಧ್ಯೆ, ಮುಖ್ಯಮಂತ್ರಿ ಮಾತನಾಡಿ, ಈಗಾಗಲೇ ಮಾಧುಸ್ವಾಮಿ ಸ್ಪಷ್ಟನೆ ಕೊಟ್ಟಿದ್ದಾರೆ. ಮಾಧುಸ್ವಾಮಿ ಬೇರೆ ಅರ್ಥದಲ್ಲಿ ಮಾತನಾಡಿದ್ದಾರೆ ಅಷ್ಟೇ.. ಇದನ್ನು ತಪ್ಪು ತಿಳಿದುಕೊಳ್ಳುವುದು ಬೇಡ ಎಂದಿದ್ದಾರೆ.
#publictv #hrranganath #bigbulletin