Paresh Mesta Case: ಸಿಬಿಐ ಸಲ್ಲಿಸಿದ್ದ ವರದಿಯಲ್ಲಿ ಬಿಗ್ ಟ್ವಿಸ್ಟ್ | Public TV

2022-10-04 1

2017ರ ಡಿಸೆಂಬರ್ 6ರಂದು ನಡೆದಿದ್ದ ಗಲಭೆಯಲ್ಲಿ ಕಾಣಯಾಗಿ, ಎರಡು ದಿನಗಳ ಬಳಿಕ ಶವವಾಗಿ ಪತ್ತೆ ಆಗಿದ್ದ ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ, ಪರೇಶ್ ಮೇಸ್ತಾ ಅವರದ್ದು ಕೊಲೆಯಲ್ಲ. ಆಕಸ್ಮಿಕ ಸಾವು ಎಂದು ಹೊನ್ನಾವರದ ಕೋರ್ಟ್‍ಗೆ ವರದಿ ಸಲ್ಲಿಸಿದೆ. ಈ ವರದಿ ಪರಿಶೀಲಿಸಿದ ಕೋರ್ಟ್, ನವೆಂಬರ್ 16ಕ್ಕೆ ತೀರ್ಪನ್ನು ಕಾಯ್ದಿರಿಸಿದೆ. ಇನ್ನು ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಬಿಜೆಪಿಗೆ ಕುಟುಕಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು. ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದು ಕಿಡಿ ಕಾರಿದ್ದಾರೆ.

#publictv #pareshmesta #honnavar