ಭಾರತದ ಜನಪ್ರಿಯ ಮೋಟಾರ್‌ಸೈಕಲ್ ತಯಾರಕ ಕಂಪನಿಯಾದ ರಾಯಲ್ ಎನ್‌ಫೀಲ್ಡ್ ಕೊನೆಗೂ ತನ್ನ ಗೆರಿಲ್ಲಾ 450 ಬೈಕ್ ಅನ್ನು ಇಂದು ಸದ್ದಿಲ್ಲದೇ ಬಿಡುಗಡೆ ಮಾಡಿದೆ. ಸ್ಪೇನ್‌ನ ಬಾರ್ಸಿಲೋನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಬೈಕ್ ಅನ್ನು ಬಿಡುಗಡೆಗೊಳಿಸಿದೆ. ಇದನ್ನು ಅನಲಾಗ್, ಡ್ಯಾಶ್, ಫ್ಲ್ಯಾಶ್ ಎಂಬ ಮೂರು ವೇರಿಯೆಂಟ್‌ಗಳಲ್ಲಿ ಪರಿಚಯಿಸಲಾಗಿದೆ. ರಾಯಲ್ ಎನ್‌ಫೀಲ್ಡ್ ಗೆರಿಲ್ಲಾ 450 ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.2.39 ಲಕ್ಷದಿಂದ ಆರಂಭವಾಗಿ ರೂ.2.54 ಲಕ್ಷಗಳಾಗಿದೆ. ಬಹುಶಃ 450 ಸಿಸಿ ಬೈಕ್ ಇಷ್ಟು ಅಗ್ಗದ ಬೆಲೆಗೆ ಬಿಡುಗಡೆಯಾಗಿರುವುದು ಇದೇ ಮೊದಲು. ಬೈಕ್‌ನ ಹೆಚ್ಚಿನ ವಿಶೇಷತೆಗಳನ್ನು ಇಲ್ಲಿ ನೋಡೋಣ.
#Royalenfield #guerilla450 #DriveSpark #REGuerilla
~PR.158~